ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಾ.ಎಂ.ಬಿ ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ), ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು) ಮತ್ತು ಎ. ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ಇತ್ತೀಗೆಚೆ ವರ್ಗಾವಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿತ್ತು.





















































 
 

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top