ಪುತ್ತೂರು: ಪುತ್ತೂರಿನ ನೂತನ ತಹಶೀಲ್ದಾರ್ ಆಗಿ ಪುರಂದರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ತಹಶೀಲ್ದಾರ್ ಆಗಿದ್ದ ಪುರಂದರ ಅವರು ವರ್ಗಾವಣೆಗೊಂಡು ಬಂದಿದ್ದಾರೆ.
ಮೂಲತ: ಬೆಳ್ತಂಗಡಿ ನಿವಾಸಿಯಾಗಿರುವ ಪುರಂದರರವರು ಕಾರ್ಕಳ, ಬೈಂದೂರು, ಕುಂದಾಪುರ, ಬಂಟ್ವಾಳ, ಕಡಬ, ಮಂಗಳೂರು, ಬಾಗಲಕೋಟೆ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬೆಳ್ತಂಗಡಿಯಲ್ಲಿ ಉಪ ತಹಶೀಲ್ದಾರ್ ಆಗಿ, ಮಂಗಳೂರು ಜಿಲ್ಲಾ ಪಂಚಾಯಿತಿ, ಉಡುಪಿ ತಾಲೂಕು ಪಂಚಾಯಿತಿ, ಮಂಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ. ಬಂಟ್ವಾಳದಲ್ಲಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು 94 ಸಿ ಹಕ್ಕುಪತ್ರ ವಿತರಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಹಾಗೂ ಕಾರ್ಕಳದಲ್ಲಿ ತಹಶೀಲ್ದಾರ್ ಆಗಿರುವ ಅವಧಿಯಲ್ಲಿ ಭೂಮಿ ನಿರ್ವಹಣೆಯಲ್ಲಿ ರಾಜ್ಯದಲ್ಲಿ 3 ಬಾರಿ ಪ್ರಥಮ ಹಾಗೂ 2 ಬಾರಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಶಿವಶಂಕರ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ದಯಾನಂದ, ಮತ್ತಿತರರು ಉಪಸ್ಥಿತರಿದ್ದರು.
























