ಜ್ಞಾನವಾಪಿ ಮಸೀದಿ ಕೆಳಮಹಡಿಯಲ್ಲಿ ಹಿಂದೂಗಳ ಪೂಜೆಗೆ ಯಾವುದೇ ತಡೆ ನೀಡಲು ಸಾಧ್ಯವಿಲ್ಲ| ಅಲಹಾಬಾದ್ ಹೈಕೋರ್ಟ್‍ ಹೇಳಿಕೆ

ಹೊಸದಿಲ್ಲಿ: ಜ್ಞಾನವಾಪಿ ಮಸೀದಿಯ ಕೆಳಮಹಡಿಯಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿರುವ ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶದ ಬೆನ್ನಲ್ಲೇ ಹಿಂದೂಗಳ ಪೂಜೆ ಯಾವುದೇ ರೀತಿಯ ತಡೆ ನೀಡಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್‍ ತಿಳಿಸುವ ಮೂಲಕ ಮತ್ತೊಂದು ಜಯ ಲಭಿಸಿದಂತಾಗಿದೆ.

ಇದೀಗ ಈ ಕುರಿತು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಏರಿದ್ದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಜ್ಞಾನವಾಪಿ ಪ್ರಕರಣದ ಶುಕ್ರವಾರದ ವಿಚಾರಣೆ ಪೂರ್ಣಗೊಂಡಿದ್ದು, ಈ ಸಮಯದಲ್ಲಿ ಮಸೀದಿ ಸಮಿತಿಗೆ ಹೈಕೋರ್ಟ್‌ನಿಂದ ಯಾವುದೇ ಪರಿಹಾರ ಸಿಕ್ಕಿಲ್ಲ. ಇದರಿಂದಾಗಿ ಜ್ಞಾನವಾಪಿಯಲ್ಲಿರುವ ನೆಲಮಾಳಿಗೆಯಲ್ಲಿ ಹಿಂದುಗಳ ಪೂಜೆ ಮುಂದುವರಿಯುತ್ತದೆ. ಮುಂದಿನ ವಿಚಾರಣೆ ಫೆ.6 ರಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ಮಸೀದಿ ಸಮಿತಿಯು ತನ್ನ ಅರ್ಜಿಯಲ್ಲಿ ಪೂಜಾ ಸೇವೆಗಳಿಗೆ ಮಧ್ಯಂತರ ನಿಷೇಧವನ್ನು ಕೋರಿತ್ತು, ಆದರೆ ನ್ಯಾಯಾಲಯವು ಈ ಅನುಮತಿ ನೀಡಿಲ್ಲ. ಫೆಬ್ರುವರಿ 6ರೊಳಗೆ ತನ್ನ ಮನವಿಯನ್ನು ತಿದ್ದುಪಡಿ ಮಾಡುವಂತೆ ನ್ಯಾಯಾಲಯವು ಮಸೀದಿ ಸಮಿತಿಯನ್ನು ಕೇಳಿದೆ. ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನ್ಯಾಯಾಲಯ ಆಡಳಿತಕ್ಕೆ ಆದೇಶ ನೀಡಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್‌ ಇಂತೇಜಾಮಿಯಾ ಮಸೀದಿ ಸಮಿತಿ ಮಸೀದಿ ಆವರಣದಲ್ಲಿರುವ ವ್ಯಾಸ್‌ಜಿ ನೆಲಮಾಳಿಗೆಯಲ್ಲಿ ಹಿಂದೂ ಭಕ್ತರಿಗೆ ಪೂಜೆ ಮಾಡಲು ವಾರಣಾಸಿ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ನಿರ್ಧಾರದ ವಿರುದ್ಧ ಮಸೀದಿ ಸಮಿತಿ ಗುರುವಾರ ಅಲಹಾಬಾದ್‌ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮುನ್ನ ಮಸೀದಿ ಸಮಿತಿ ನೇರವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿತ್ತು. ಆದರೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ನೀವು ಮೊದಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದ್ದರಿಂದ ಮಸೀದಿ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿತ್ತು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top