ನಳೀಲು ದೇವಸ್ಥಾನದ ಮಹಾದ್ವಾರ, ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಫೆ. 17ರಿಂದ 24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪೆರ್ಲಂಪಾಡಿ1: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಹಾಗೂ ರಸ್ತೆಯ ಉದ್ಘಾಟನೆಯನ್ನು ಶಾಸಕ ಹಾಗೂ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಶೋಕ್ ಕುಮಾರ್ ರೈ ಅವರು ಫೆ. 4ರಂದು ನೆರವೇರಿಸಿದರು.

ಫೆ. 17ರಿಂದ 24ರವರೆಗೆ ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಸಂದರ್ಭ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ತನ್ನ ಶಾಸಕ ನಿಧಿಯಿಂದ 20 ಲಕ್ಷ ರೂ. ಮಂಜೂರು ಮಾಡಿದ್ದರು. ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಉದ್ಘಾಟನೆಗೊಂಡಿದೆ.

ದಾನಿಗಳ ಸಹಕಾರದಿಂದ ದೇವಸ್ಥಾನಕ್ಕೆ ಮಹಾದ್ವಾರ ನಿರ್ಮಿಸಲಾಗಿದೆ.



































 
 

ಇದೇ ಸಂದರ್ಭ ರಸ್ತೆ ಕಾಮಗಾರಿ ನಿರ್ವಹಿಸಿದ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರುಗುತ್ತು ಅವರನ್ನು ಸನ್ಮಾನಿಸಲಾಯಿತು.

ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಮೋದ್ ಕೆ.ಎಸ್., ಸದಸ್ಯರಾದ ಶುಭಲತಾ ಜೆ. ರೈ, ಪಿ.ಪಿ. ಸುಂದರ, ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ರೈ ನಳೀಲು, ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಕುಂಬ್ರ ದಯಾಕರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

  1. ↩︎

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top