ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು, ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘಪುತ್ತೂರು ಮತ್ತು ಮಹಿಳಾ ಘಟಕದ ಸಹಕಾರದೊಂದಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು ವಲಯದ ಆತಿಥ್ಯದಲ್ಲಿ ಮುಂಡೂರು ವಲಯ ಮಟ್ಟದ ‘ಯುವ ಕ್ರೀಡಾ ಸಂಭ್ರಮ’ ನರಿಮೊಗರು ಉ.ಹಿ.ಪ್ರಾ.ಶಾಲಾ ಮೈದಾನದಲ್ಲಿ ನಡೆಯಿತು. ನಡೆಯಿತು.
ನರಿಮೊಗರು ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕರೆಮನೆ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಳಿಕ ಪಾರಿವಾಳವನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಹಾಗೂ ರಾಜಕೀಯವಾಗಿ ಒಕ್ಕಲಿಗ ಸಮುದಾಯದ ಶಕ್ತಿ ಏನೆಂಬುದನ್ನು ತೋರಿಸುವುದರ ಜೊತೆಗೆ ನಮ್ಮ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಒಕ್ಕಲಿಗ ಗೌಡ ಸಮಾಜ ಸೇವಾ ಸಂಘದ ಕೊಡುಗೆ ಅಪಾರ ಎಂದು ಹೇಳಿದರು.
ಸಮಾಜ ಸೇವಕಿ ನಳಿನಿ ಲೋಕಪ್ಪ ಗೌಡ ಮಾತನಾಡಿ, ಗೌಡ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದೆ. ಈ ಒಗ್ಗಟ್ಟು ಹೀಗೆ ಮುಂದವರಿಯಲಿ ಎಂದು ಶುಭ ಹಾರೈಸಿದರು.
ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ ಮಾತನಾಡಿ, ಸಂಘಟನೆ ಇದ್ದರೆ ವಿವಿಧ ಕ್ಷೇತ್ರಗಳಲ್ಲಿ ನಾವು ಕೆಲಸದಲ್ಲಿ ತೊಡಗಿಸಿಕೊಳ್ಳಬಹುದು. ಈ ಮೂಲಕ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬಹುದು ಎಂದರು.
ಸ್ವಸಹಾಯ ಸಂಘಗಳ ಸ್ಥಾಪಕಾಧ್ಯಕ್ಷ ಎ.ವಿ. ನಾರಾಯಣ ಗೌಡ, ವಾಸ್ತು ತಜ್ಞ ವೀರಪ್ಪ ಗೌಡ ಕರುಂಬಾರು, ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಶುಭ ಹಾರೈಸಿದರು.
ಮೂವರು ಪ್ರತಿಭಾನ್ವಿತರಿಗೆ ಸನ್ಮಾನ ಮಾಡಲಾಯಿತು. ಯುವ ಒಕಕ್ಲಿಗ ಗೌಡ ಸೇವಾ ಸಂಘದ ಮುಂಡೂರು ವಲಯದ ಅಧ್ಯಕ್ಷ ಚೆನ್ನಪ್ಪ ಗೌಡ ಸ್ವಾಗತಿಸಿದರು. ವಲಯ ಉಸ್ತುವಾರಿ ರಮೇಶ್ ಗೌಡ ಪಜಿಮಣ್ಣು ವಂದಿಸಿದರು. ವಸಂತ ವೀರಮಂಗಲ ಕಾರ್ಯಕ್ರಮ ನಿರೂಪಿಸಿದರು.