ರಸ್ತೆ ಬದಿ ಮಾದಕ ವಸ್ತುಗಳ ಮಾರಾಟ | ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ

ಮಂಗಳೂರು : ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಉಪ-ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್‌ ಸಿಕ್ಕೇರಾ (33) ಬಂಧಿತ ಆರೋಪಿಗಳು.

ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್ ಐ.ಪಿ.ಎಸ್, ಉಪ ಪೊಲೀಸ್‌ ಆಯುಕ್ತ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಗ್ ತೋರಟ್ ರವರ ನೇತೃತ್ವದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಅಜ್ಜತ್‌ ಆಲಿ ಮತ್ತು ಆ್ಯಂಟಿ ಡ್ರಗ್ ತಂಡದ ಕೇಂದ್ರ ಉಪ ವಿಭಾಗದ ಅಧಿಕಾರಿ ಪಿಎಸ್ ಐ ಪ್ರದೀಪ್ ಟಿ ಆರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.



































 
 

ಬಂಧಿತರಿಂದ ಸುಮಾರು 50 ಸಾವಿರ ರೂ. ಮೌಲ್ಯದ 27 ಗ್ರಾಂ ಹೈಡೋವೀಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೆಜಿ 95 ಗ್ರಾಂನ ಗಾಂಜಾ, 8000 ರೂ. ಮೌಲ್ಯದ ಗಾಂಜಾ ಆಪ್ ಆಯಿಲ್, 16,800 ರೂ. ಮೌಲ್ಯದ ಎಲ್.ಎಸ್.ಡಿ ಸ್ಟಾಂಫ್. ಡಿಜಿಟಲ್ ತೂಕ ಮಾಪನಗಳು-2, ಕೃತ್ಯಕ್ಕೆ ಬಳಸಿದ 90,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್ ಮತ್ತು 20 ಲಕ್ಷ ರೂ. ಮೌಲ್ಯದ ಕಪ್ಪು ಬಣ್ಣದ ಹುಂಡೈ ಕಂಪೆನಿಯ ವರ್ನ ಮಾಡೆಲ್ನ ಕಾರು- 1 ಮತ್ತು ಇತರ ಸೊತ್ತುಗಳನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top