ಪೆರ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೇಷ್ಠ ಕಾರ್ಯಕರ್ತ ಪೆರ್ಲದ ಗೋಪಾಲ ಚೆಟ್ಟಿಯಾರ್ ( 78) ಇಂದು ನಿಧನ ಹೊಂದಿದ್ದಾರೆ.
ಕಳೆದ ಐದು ದಶಕಗಳಿಂದ ವಿಭಾಗ, ಪ್ರಾಂತ, ಕ್ಷೇತ್ರೀಯ ಸ್ಥರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಮುನ್ನಡೆಸಿದ್ದಾರೆ.
ಮೂಲತಃ ಕೇರಳದ ಪೆರ್ಲದವರಾಗಿದ್ದ ಅವರು ವಿದ್ಯಾರ್ಥಿ ಜೀವನದಲ್ಲೇ ಸಂಘದ ಸ್ವಯಂ ಸೇವಕರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿ ಬಳಿಕ ಪೂರ್ಣ ಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.