ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಹೈಕೋರ್ಟ್!!

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಬಿಸಿ ಇದೀಗ ಪಕ್ಷಕ್ಕೆ ತಟ್ಟಿದೆ.

ಆಗ ವಿಪಕ್ಷ ನಾಯಕರಾಗಿದ್ದ ಈಗಿನ ಸಿಎಂ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ. ಪಾಟೀಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಹೈಕೋರ್ಟ್ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್. ಈಶ್ವರಪ್ಪ ಹೆಸರೂ ಕೇಳಿಬಂದಿತ್ತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಸ್ತೆ ತಡೆ ನಡೆಸಿ‌ ಸಾರ್ವಜನಿಕರಿಗೆ ತೊಂದರೆ‌ ಕೊಟ್ಟಿದ್ದು, ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಇತ್ಯಾದಿ ಆರೋಪಗಳಡಿ ಪ್ರಕರಣ ದಾಖಲಿಸಿದ್ದರು.



































 
 

ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ. ಪಾಟೀಲ್, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ಕೃಷ್ಣದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿಗಳನ್ನು ವಜಾಗೊಳಿಸಿದೆ. ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಮಾ. 6ರಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ರೀತಿ ಮಾ. 7ರಂದು ರಾಮಲಿಂಗ ರೆಡ್ಡಿ, ಮಾ. 11ರಂದು ಸುರ್ಜೆವಾಲಾ, ಮಾ. 15ರಂದು ಎಂ.ಬಿ. ಪಾಟೀಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top