ಸುಳ್ಯ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬುಧವಾರ ಬೆಳಿಗ್ಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.
ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಬಳಿಕ ಶ್ರೀ ದೇವರ ಬಲಿ ಉತ್ಸವದಲ್ಲಿ ಪಾಲ್ಗೊಂಡರು.
ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್ ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.