ಕುಸ್ತಿ ಫೆಡರೇಶನ್ ಅಧ್ಯಕ್ಷರಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ

ಕುಸ್ತಿಪಟು ವಿನೇಶ್‌ ಫೋಗಟ್‌ ಗಂಭೀರ ಆರೋಪ

ಹೊಸದಿಲ್ಲಿ : ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕ್ರೀಡಾ ಆಡಳಿತಾಧಿಕಾರಿ ಮತ್ತು ಬಿಜೆಪಿ ಸಂಸದ ತಿರಸ್ಕರಿಸಿದ್ದಾರೆ.

ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ನಂತರ ಡಬ್ಲ್ಯುಎಫ್‌ಐ ಜತೆ ಭಿನ್ನಾಭಿಪ್ರಾಯ ಹೊಂದಿರುವ ವಿನೇಶ್ ಅವರು, ಲಖನೌ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತಿದಾರರು ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಶೋಷಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ ತಾನು ಅಂತಹ ಶೋಷಣೆಯನ್ನು ಎಂದಿಗೂ ಎದುರಿಸಲಿಲ್ಲ ಎಂದು ವಿನೇಶ್ ಸ್ಪಷ್ಟಪಡಿಸಿದ್ದಾರೆ.



































 
 

ಕೆಲ ಕೋಚ್‌ಗಳು ಒಕ್ಕೂಟದ ಬೆಂಬಲದಿಂದ ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಕುಸ್ತಿಗೆ ಬರುವ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ. ಕುಸ್ತಿ ಒಕ್ಕೂಟದ ಅಧ್ಯಕ್ಷರೇ ಅದೆಷ್ಟೋ ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿನೇಶ್‌ ಫೋಗಟ್‌ ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top