ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ ಫೆ.11 ಭಾನುವಾರ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಚಾಲಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ರೀಡಾ ಸಂಭ್ರಮದ ಅಂಗವಾಗಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು.
ಭಾನುವಾರ ಬೆಳಿಗ್ಗೆ 7.30 ಕ್ಕೆ ಕ್ರೀಡಾಜ್ಯೋತಿ ವಾಹನ ಜಾಥಾ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ತೆಂಕಿಲ ಶಾಲಾ ಕ್ರೀಡಾಂಗಣದ ತನಕ ನಡೆಯಲಿದ್ದು, ಪ್ರಗತಿಪರ ಕೃಷಿಕೆ ಯಶೋಧ ಮೋನಪ್ಪ ಗೌಡ ಚಾಲನೆ ನೀಡುವರು. ಮಾಜಿ ಶಾಸಕ ಸಂಜೀವ ಮಠಂದೂರು ಪ್ರಧಾನ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ನಗರಸಭೆ ಮಾಜಿ ಸದಸ್ಯ ವಿಶ್ವನಾಥ ಗೌಡ ಬನ್ನೂರು, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ಯತೀಂದ್ರ ಕೊಚ್ಚಿ, ಪ್ರಗತಿಪರ ಕೃಷಿಕ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಲೋಕೇಶ್ ಚಾಕೋಟೆ, ಸಂಪತ್ ಕುಮಾರ್ ಪಾಂಗ್ಲಾಯಿ, ಮೋಹನ ಗೌಡ ಬನ್ನೂರು, ನಾಗರಾಜ ಗೌಡ ತೆಂಕಪ್ಪಾಡಿ, ಪ್ರಶಾಂತ್ ಕೆಮ್ಮಾಯಿ, ನಗರಸಭೆ ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.
ಬೆಳಿಗ್ಗೆ 8.45 ಕ್ಕೆ ಕ್ರೀಡಾ ಸಂಭ್ರಮವನ್ನು ಪಡ್ನೂರು ಗ್ರಾಮದ ಊರ ಗೌಡರಾದ ಸಂಕಪ್ಪ ಗೌಡ ಕುಂಬಾಡಿ ಉದ್ಘಾಟಿಸುವರು. ಬಳಿಕ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡುವರು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಡಿಕೇರಿ ಶಾಸಕ ಮಂತರ್ ಗೌಡ, ವಿಧಾನಪರಿಷತ್ ಸದಸ್ಯ ಭೋಜೇ ಗೌಡ, ಚಿಕ್ಕಮಗಳೂರು ಮಾಜಿ ಶಾಸಕ ಸಿ.ಟಿ.ರವಿ ಪ್ರಧಾನ ಉಪಸ್ಥಿತರಿರುವರು. ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ ಧ್ವಜಾರೋಹಣ ನೆರವೇರಿಸುವರು. ಎಸ್.ಆರ್.ಕೆ.ಲ್ಯಾಡರ್ಸ್ ಮಾಲಕ ಕೇಶವ ಗೌಡ ಅಮೈ ವೇದಿಕೆ ಉದ್ಘಾಟಿಸುವರು. ಮಾಜಿ ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡುವರು.ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಬೆಳ್ಳಾರೆ ಡಾ.ಶಿವರಾಮ ಕಾರಂತ ಸರಕಾರಿ ಕಾಲೇಜಿನ ರಾಮಚಂದ್ರ ಕೆ., ಪುತ್ತೂರು ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಬೆಂಗಳೂರು ಅಖಿಲ ಕರ್ನಾಟಕ ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ರಂಗೇ ಗೌಡ, ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಮಾಜಿ ತಾಪಂ ಸದಸ್ಯೆ ನೇತ್ರಾವತಿ ಕೆ.ಪಿ. ಗೌಡ ಪಾಲ್ಗೊಳ್ಳುವರು. ಅತಿಥಿಗಳಾಗಿ ಡಾ.ಯದುರಾಜ್ ಡಿ.ಕೆ., ಮೆಸ್ಕಾಂನ ವಿಜಯಲಕ್ಷ್ಮೀ, ದ.ಕ.ಸಹಾಯಕ ಯೋಜನಾ ವ್ಯವಸ್ಥಾಪಕ ಹರೀಶ್ ಮೆದು, ಸಹಾಯಕ ಇಂಜಿನಿಯರ್ ಜನಾರ್ದನ ಗೌಡ, ಹಿಂದುಳಿದ ವರ್ಗಗಳ ಶಿಕ್ಷಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ರಾಜ್ ಗೋಪಾಲ್ ಎನ್.ಎನ್., ತಾ.ಪಂ. ಮಾಜಿ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಗದ ನಿರ್ದೇಶಕ ಸತೀಶ್ ಗೌಡ ಪಾಂಬಾರು, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ತೀರ್ಥಾನಂದ ದುಗ್ಗಲ, ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ ಗಂಗಾಧರ ಗೌಡ ಕೆಮ್ಮಾರ, ದರ್ಬೆ ಕಾರ್ ಟೆಕ್ ನ ನಳಿನಾಕ್ಷ ಗೌಡ, ಉದ್ಯಮಿ ಬಾಲಕೃಷ್ಣ ಗೌಡ ಬಾರ್ತಿಕುಮೇರು, ನಂದೀಶ ಗೌಡ ಕೆಮ್ಮಾಯಿ, ಪ್ರಗತಿಪರ ಕೃಷಿಕರಾದ ನಾರಾಯಣ ಗೌಡ ಕೊಡಿಮರ, ಜಯಂತ ಗೌಡ, ಗಂಗಯ್ಯ ಗೌಡ, ಪ್ರವೀಣ್ ಗೌಡ, ಗಂಗಾಧರ ಗೌಡ, ಲಕ್ಷ್ಮಣ ಗೌಡ ಕೂಟೇಲು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ಐ.ಟಿ.ಐ. ಸಂಚಾಲಕ ಯು.ಪಿ.ರಾಮಕೃಷ್ಣ ಗೌಡ, ಪಿ.ಡಬ್ಲ್ಯೂ.ಡಿ. ಸಹಾಯಕ ಇಂಜಿನಿಯರ್ ಪ್ರಮೋದ್ ಕೆ.ಕೆ., ಮುಕ್ವೆ ನಿತ್ಯ ಫುಡ್ ಪ್ರಾಡಕ್ಟ್ ಮಾಲಕ ರಾಧಾಕೃಷ್ಣ ಗೌಡ ಇಟ್ಟಿಗುಂಡಿ, ಉದ್ಯಮಿ ಮಂಜುನಾಥ ಗೌಡ, ಶೇಖರ ಗೌಡ ಬನ್ನೂರು, ಕೇಪುಳು ಜ್ಯೋತಿ ಇಲೆಕ್ಟ್ರಿಕಲ್ಸ್ ಮಾಲಕ ಸುಂದರ ಗೌಡ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವ ಸಲಹೆಗಾರ ಪುರುಷೋತ್ತಮ ಮುಂಗ್ಲಿಮನೆ, ಒಕ್ಕಲಿಗ ಗೌಡ ಸ್ವಸಹಾಯ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಎ.ವಿ.ನಾರಾಯಣ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ರಾಧಾಕೃಷ್ಣ ನಂದಿಲ, ಮಾಜಿ ಪ್ರಧಾನ ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳಿಯಪ್ಪ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಕಟ್ಟಪುಣಿ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌಡ, ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಪ್ರೇಮಲತಾ, ದಿನೇಶ್ ಗೌಡ ಶೇವಿರೆ, ಮೋಹಿನಿ ವಿಶ್ವನಾಥ ಹಾಗೂ ನಾರಾಯಣ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿ ಆನಂದ ಗೌಡ ತೆಂಕಿಲ, ಕ್ರೀಡಾ ಕಾರ್ಯದರ್ಶಿ ಪವನ್ ಗೌಡ ತೆಂಕಿಲ, ಸದಸ್ಯ ವಸಂತ ನೆಕ್ಕರೆ ಉಪಸ್ಥಿತರಿದ್ದರು.