ಬೆಳ್ತಂಗಡಿ: ವಿಷ ಸೇವಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳದ ಪಿಜತ್ತಡ್ಕ ನಿವಾಸಿ ಕಿಶೋರ್ ಹಾಗೂ ಸೌಮ್ಯ ದಂಪತಿ ಪುತ್ರಿ ತ್ರಿಶಾ (16) ಮೃತ ವಿದ್ಯಾರ್ಥಿನಿ. ಬೆಳ್ತಂಗಡಿಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ.
ಫೆ.7 ರಂದು ವಿಷ ಸೇವಿಸಿದ್ದ ತ್ರಿಶಾಳನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.