ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ

ಪುತ್ತೂರು: ಶಿಕ್ಷಣ ಒಬ್ಬ ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು. ಕೇವಲ ಪರೀಕ್ಷೆ ಬರೆಯಲು ಮಾತ್ರ ಸೀಮಿತವಾಗದೆ ಉತ್ತಮ ನಾಗರೀಕರನ್ನಾಗಿ ಮಾಡಬೇಕು. ಇಂದಿನ ಭಾರತದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಮೊದಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು ಜವಬ್ದಾರಿಯನ್ನು ನಿಭಾಯಿಸಲು ಕಲಿಯಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತ ಕಾಮಾನಂದಜಿ ಹೇಳಿದರು.

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆದ ವಿವೇಕಾನಂದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ದಶಮಾನೋತ್ಸವ ಆಚರಣೆಯ ಪ್ರಯುಕ್ತ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ಆದರ್ಶ ಜೀವನ, ಧ್ಯೇಯ, ಸಾಧನೆ, ಇವುಗಳನ್ನು ಇಂದಿನ ಯುವ ಜನತೆ ಅರಿತುಕೊಳ್ಳಬೇಕಾದದ್ದು ಅವಶ್ಯಕವಾಗಿದೆ. ಅವರೊಬ್ಬ ರಾಷ್ಟ್ರ ಭಕ್ತ ಸಂತ. ಸ್ವಾಮಿ ವಿವೇಕಾನಂದರು ತಮ್ಮ ಚಿಂತನೆಯಲ್ಲಿ ನಮ್ಮ ಭಾರತ ಹೇಗಿರಬೇಕು ಅಂದುಕೊಂಡಿದ್ದರು, ಅಂತಹ ಭಾರತ ಕಟ್ಟುವುದು ಯುವಜನರ ಕರ್ತವ್ಯವಾಗಿದೆ ಎಂದರು.



































 
 

ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಂಸ್ಕೃತಿಯನ್ನು ಅನುಷ್ಠಾನಗೊಳಿಸಿದವರಲ್ಲಿ ಪ್ರಮುಖರು ಸ್ವಾಮಿ ವಿವೇಕಾನಂದರು. ಒಬ್ಬ ವ್ಯಕ್ತಿ ಅವನ ವಯಕ್ತಿಕ ಜೀವನ ಕಟ್ಟಿಕೊಳ್ಳಲು ಹೊರಟಾಗ ಆಧ್ಯಾತ್ಮಿಕತೆ ನೆರವಾಗುತ್ತದೆ. ಈಗಿನ ಕಾಲ ಪರಿವರ್ತನೆಯ ಕಾಲ. ಹಾಗಾಗಿ ವಿದ್ಯಾರ್ಥಿಗಳು ವಿವೇಕಾನಂದರ ತತ್ವಗಳನ್ನು ಜೀವನದಲ್ಲಿ ಅಳವಡಿಸಿ ನಡೆಯಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಕಾಲೇಜಿನ ವಿಶೇಷ ಅಧಿಕಾರಿ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಉಪಸ್ಥಿತರಿದ್ದರು. ಕಾಲೇಜಿನ ಪರೀಕ್ಷಾಂಗ ಕುಲ ಸಚಿವ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಶ್ರೀಧರ್ ಹೆಚ್.ಜಿ. ಸ್ವಾಗತಿಸಿದರು. ಸ್ನಾತಕೋತರ ವಿಭಾಗದ ಡೀನ್, ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ವಂದಿಸಿದರು. ಉಪನ್ಯಾಸಕ ಮಧುಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top