ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಪುತ್ತೂರು: ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.

ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ. ಸಿ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾ ವಿಧಿ ನಡೆಸಿಕೊಟ್ಟರು.



































 
 

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರವನ್ನು ಹೊಂದಿರುವ ರಥವನ್ನು ಬ್ಯಾಂಡ್ ಮೂಲಕ ಎನ್. ಸಿ. ಸಿ ವಿದ್ಯಾರ್ಥಿಗಳ ಪಥ ಸಂಚಲನದೊಂದಿಗೆ ಕಾಲೇಜಿನ ಆವರಣದತ್ತ ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಪುತ್ತೂರಿನ ತಹಶೀಲ್ದಾರ್ ಪುರಂದರ ಹೆಗ್ಡೆ, ಸಂತ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ಡಾ. ಆಂಟೋನಿ ಪ್ರಕಾಶ್ ಮೊಂತೆರೊ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಯಶಸ್ ಘಟಕದ ವಿದ್ಯಾರ್ಥಿಗಳಿಂದ ಸಂವಿಧಾನದ ರಕ್ಷಣೆ ಮತ್ತು ಕರ್ತವ್ಯದ ಬಗ್ಗೆ ಬೀದಿ ನಾಟಕ, ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ವಿದ್ಯಾರ್ಥಿಗಳಿಂದ ಸಂವಿಧಾನದ ಆಶಯವನ್ನು ನೃತ್ಯದ ಮೂಲಕ ತೋರಿಸಿದರು. ಅಂಬೇಡ್ಕರ್ ಅವರ ತತ್ವ ಆದರ್ಶಗಳ ಬಗ್ಗೆ ಸಂತ ಫಿಲೋಮಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಸ್ವಾಗತಿಸಿ, ರೋವರ್ ಸಂಯೋಜಕ ಡಾ. ಈಶ್ವರ ಪ್ರಸಾದ್ ಕೆ. ಎಸ್. ಕಾರ್ಯಕ್ರಮ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top