ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ 75 ನೇ ಗಣರಾಜ್ಯೋತ್ಸವದ ಕುರಿತ ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ ಫೆ.14 ಬುಧವಾರ ಪರ್ಲಡ್ಕ ಬಾಲವನದಲ್ಲಿ ನಡೆಯಲಿದೆ.
ಬೆಳಗ್ಗೆ 9 ರಿಂದ ನಡೆಯುವ ಕಾರ್ಯಕ್ರಮವನ್ನು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾರಿ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಹಸಿಲ್ದಾರ್ ಪುರಂದರ್ ಹೆಗ್ಡೆ, ದೈಹಿಕ ಪರಿವೀಕ್ಷಕ ಸುಂದರ ಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಪುತ್ತೂರು ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಸುಳ್ಯ ಪಟ್ಟಾಭಿರಾಮ ಇವರಿಂದ ಹಾಸ್ಯ ಪ್ರಹಸನ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.