ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ

ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿಯಾಗಿ ಫೆ.14ರಂದು ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಸಂಸ್ಥಾನಮ್‌ ನಲ್ಲಿಅರ್ಚಕ ವೇ. ಮೂ. ವಿ. ಎಸ್ ಭಟ್ ಅವರು ದೀಪ ಪ್ರಜ್ವಲನೆ ಮಾಡಿದರು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ ಸೀತಾರಾಮ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾ‌ರ್ ರೈ ಬಾಲ್ಯೂಟ್ಟು ಮಾತನಾಡಿದರು.



































 
 

ಹೊರೆಕಾಣಿಕೆ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ಹೊಟೇಲ್ ಹರಿಪ್ರಸಾದ್‌ ಮಾಲಕ ಹರಿನಾರಾಯಣ ಹೊಳ್ಳ, ಹೊರೆಕಾಣಿಕೆ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನೆಲ್ಲಿಕಟ್ಟೆ, ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಎಂ. ಅಳಿಕೆ, ಪ್ರಧಾನ ಕಾರ್ಯದರ್ಶಿ ನವೀನ್ ಕುಲಾಲ್, ಹೊರೆಕಾಣಿಕೆ ಕೇಂದ್ರ ಸಮಿತಿಯ ದೇವಿಪ್ರಸಾದ್, ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ಅಶೋಕ್ ರೈ ಅರ್ಪಿಣಿಗುತ್ತು, ಉಪಾಧ್ಯಕ್ಷರಾಗಿರುವ ಒಡಿಯೂರು ಗುರುದೇವಾ ಸೇವಾ ಬಳಗದ ಅಧ್ಯಕ್ಷ ಸುಧೀರ್ ನೋಂಡ, ಹೊರೆಕಾಣಿಕೆ ಸಮಿತಿ ಸಂಘಟನಾ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ಕವನ್ ನಾಯ್ಡ್ ಸ್ನೇಹ ಸಂಗಮ ಅಟೋ ರಿಕ್ಷಾದ ಚಾಲಕರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top