ಬಂಟ್ವಾಳ: ಯುವತಿಯೋರ್ವಳು ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ.
ತುಮಕೂರು ಮೂಲದ ನಯನ (25) ಆತ್ಮಹತ್ಯೆ ಮಾಡಿಕೊಂಡವರು.
ನಯನ ಇಂದು ಮುಂಜಾನೆ 6.30 ವೇಳೆಗೆ ಸಂಚರಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿದ್ದಾಳೆ ಎನ್ನಲಾಗಿದೆ. ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಖಚಿತಪಡಿಸಿಕೊಂಡಿದ್ದಾರೆ. ತಕ್ಷಣ ನದಿಯಲ್ಲಿ ದೋಣಿ ಮೂಲಕ ಕಾರ್ಯಾಚರಣೆ ನಡೆಸಿದ ಗೂಡಿಬಳಿ ನಿವಾಸಿ ಮುಹಮ್ಮದ್ ಹಾಗೂ ಜೀವರಕ್ಷಕ ತಂಡ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ರೈಲ್ವೇ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.ಯುವತಿಯ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.