ಆರೋಗ್ಯ ವ್ಯತ್ಯಯ | ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು !

ಮಂಗಳೂರು : ಆರೋಗ್ಯ ವ್ಯತ್ಯಗೊಂಡ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಹೆಚ್,ಡಿ ದೇವೇಗೌಡರನ್ನು ದಾಖಲು ಮಾಡಲಾಗಿದೆ ಎನ್ನಲಾಗಿದೆ.

ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ ಆಸ್ಪತ್ರೆಗೆ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top