ಬೆಂಗಳೂರು: ಇಂದು ಘೋಷಿಸಿದ ಬಜೆಟ್‍ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಪ್ರಕಟಿಸಿದ್ದು ಈ ಮೂಲಕ ದಶಕಗಳ ಕನಸು ನನಸಾಗಿದೆ.
ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.
ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಅಭಿನಂದಿಸಿದೆ.
ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ಧವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿನಂತಿಸಿದ್ದಾರೆ.