ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥಸಪ್ತಮಿ ಆಚರಣೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ, ಪ್ರತೀ ವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುವ ಸೂರ್ಯ ತನ್ನ ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ಮೇಘಮಾಸ, ಶುಕ್ಲ ಪಕ್ಷ, ಸಪ್ತಮಿಯಾದ ಇಂದು ರಥಸಪ್ತಮಿ ಆಚರಿಸಲಾಗುತ್ತದೆ. ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿ ಇದು ಸತ್ಯ. ಈತನ ಕಿರಣಗಳಲ್ಲಿ ವಿಟಮಿನ್ ” ಡಿ ” ಹೇರಳವಾಗಿದೆ ಹಾಗೂ ನಾವು ಆಹಾರ, ರೋಗ ನಿವಾರಣೆ, ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಗಾಗಿ ಸೂರ್ಯ ನಮಸ್ಕಾರ ಮಾಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷ ರಮೇಶ್ ಚಂದ್ರ ಕಾವು, ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ನಳಿನಿ ವಾಗ್ಲೆ, ಶಿಕ್ಷಕ, ಸಹ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
ಸರಸ್ವತಿ ವಂದನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಶಾಂತಿಮಂತ್ರದೊಂದಿಗೆ ಸಂಪನ್ನಗೊಂಡಿತು. ಶಾಲಾ ಸಹ ಶಿಕ್ಷಕಿ ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು.