ಕಡಬ: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಮರ್ದಾಳದಲ್ಲಿ ಸೋಮವಾರ ನಡೆದಿದೆ.
ಕಡಬ ತಾಲೂಕಿನ ಕೊಂಬಾರು ಮಣಿಭಾಂಡದ ಮೆಕ್ಯಾನಿಕ್ ವಾಸು ಗಾಯಗೊಂಡ ಬೈಕ್ ಸವಾರ.
ಕೆಎಸ್ ಆರ್ ಟಿಸಿ ಬಸ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಎನ್ನಲಾಗಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
























