ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.30 ರಿಂದ ಗುಡ್ಡಪ್ಪ ಗೌಡ ಬಲ್ಯ ತಂಡದಿಂದ ತಾಳಮದ್ದಳೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.

ಫೆ.22 ಗುರುವಾರ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ನಾಗತಂಬಿಲ,  ಬ್ರಹ್ಮಕಲಶ ಪೂಜೆ, 11.33 ರ ವೃಷಭಲಗ್ನ ಸುಮುಹೂರ್ತದಲ್ಲಿ  ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆದು ಬಳಿಕ ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಾಂಸ್ಕೃತಿ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ 8 ರಿಂದ ವಿವಿಧ ಭಜನಾ ತಂಡದಿಂದ ಭಜನೆ, ಮಧ್ಯಾಹ್ನ 2 ರಿಂದ ಹರಿದಾಸ ಮಂಡ್ಯ ಮಧುಸೂದನ್ ತಂಡದಿಂದ ಹರಿಕಥಾ ಕಾಲಕ್ಷೇಪ ‘ಗಿರಿಜಾ ಕಲ್ಯಾಣ’, ಸಂಜೆ 4 ರಿಂದ ಪುತ್ತೂರು ಜಗದೀಶ್ ಆಚಾರ್ಯ ತಂಡದಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಲಿದೆ ಎಂದು ಅವರು ತಿಳಿಸಿದರು.



































 
 

ಸಂಜೆ 6.30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ವಹಿಸಲಿದ್ದು, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸುರೇಶ್ ಪೂಂಜಾ ಪಾಳ್ಗೊಳ್ಳುವರು. ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ ಜೈನ್, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಮನೋಹರ್, ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್, ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಅಧ್ಯಕ್ಷ ರಾಮಣ್ಣ ಗೌಡ ಹಲಂಗ, ಬನ್ನೂರು ಗ್ರಾಪಂ ಅಧ್ಯಕ್ಷೆ ಸ್ಮಿತ ಎನ್., ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ, ಪ್ರಧಾನ ಕಾರ್ಯದರ್ಶಿ ಮೌನೀಶ್ ಎನ್‍., ಬ್ರಹ್ಮಕಲಶೋತ್ಸವ ಸಮಿತಿ ಖಜಾಂಚಿ ರಮೇಶ್ ಗೌಡ ನೀರ್ಪಾಜೆ, ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top