ಪುತ್ತೂರು: ಹೊರೆಕಾಣಿಕೆ ಮೆರವಣಿಗೆ ಆರಂಭವಾಗುವ ಮೂಲಕ ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಜಯಂತ್ಯೋತ್ಸವ ಸಂಸ್ಮರಣೆ ಸಮಾರಂಭಕ್ಕೆ ಚಾಲನೆ ಸಿಕ್ಕಿದೆ.
ದರ್ಬೆ ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ತೆಂಗಿನಕಾಯಿ ಒಡೆದು ಉದ್ಘಾಟಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಮೆರವಣಿಗೆ ಮುಂಭಾಗದಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭಾವಚಿತ್ರವುಳ್ಳ ವಾಹನ ಸಾಗಿದರೆ, ಅದನ್ನು ಅನುಸರಿಸಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ವಾಹನ, ಶಾಸಕರ ವಾಹನ ನಂತರ ಹೊರೆಕಾಣಿಕೆ ಹೊತ್ತ ವಾಹನಗಳು ಒಂದರ ಹಿಂದೊಂದರಂತೆ ಸಾಲಾಗಿ ಹೊರಟವು. ಕೊಂಬು, ನಾಸಿಕ್ ಬ್ಯಾಂಡ್, ತಾಲೀಮು ಹೊರೆಕಾಣಿಕೆ ಮರೆವಣಿಗೆಯ ಕಳೆ ಹೆಚ್ಚಿಸಿತು. ಹೊರೆಕಾಣಿಕೆ ಮೆರವಣಿಗೆ ಸಂಚಾಲಕ ಪ್ರವೀಣ್ ಕುಂಟ್ಯಾನ ಸ್ವಾಗತಿಸಿದರು.