ವಿಟ್ಲ: ವಿದೇಶದಿಂದ ಮೂರು ದಿನಗಳ ಹಿಂದೆ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲ ಬಳಿಯ ಕೇಪು ಎಂಬಲ್ಲಿ ನಡೆದಿದೆ.
ಕೇಪು ಗ್ರಾಮದ ಅಡ್ಯನಡ್ಕ ನಿವಾಸಿ ಅಶ್ರಫ್ (38) ಮೃತಪಟ್ಟ ಯುವಕ.
ಅಬ್ದುಲ್ ರಹಿಮಾನ್ ಎಂಬವರ ಪುತ್ರರಾಗಿರುವ ಅಶ್ರಫ್ ಹಲವು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ ಅವರು ಕೇರಳದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು, ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ತಾಯಿ ಹಾಗೂ ಪುತ್ರನನ್ನು ಅಗಲಿದ್ದಾರೆ.