ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನೆಕ್ಕರೆ ನಿವಾಸಿ ಆಟೋ ನಡೆಸುತ್ತಿದ್ದ ಕೃಷ್ಣಪ್ಪ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು.
ಭಾನುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃಷ್ಣಪ್ಪ ಈ ಕೃತ್ಯ ಎಸಗಿದ್ದಾರೆ. ಇತ್ತೀಚೆಗಷ್ಟೇ ಹಳೆ ಆಟೋವನ್ನು ಮಾರಿ ಹೊಸ ಆಟೋ ಖರೀದಿಸಿದ್ದರು ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಅವರು, ಸಾಲದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.