ಪುತ್ತೂರು: ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಅಂಗವಾಗಿ ಪೊಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಮಾ.3 ರಂದು ದೇಶಾದ್ಯಂತ ನಡೆಯಲಿದೆ.
5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾಗಿದೆ.
ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಪ್ಪದೆ ಪೋಷಕರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರೋಗ ಬರದಂತೆ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.