ಪುತ್ತೂರು : ಹಲವು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೂರ್ನಡ್ಕ ಮರೀಲ್ ನಿವಾಸಿ ರಫೀಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರು.
ರಫೀಕ್ ಅವರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಎ.ಎಂ. ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿಯನ್ನು ಹೊಂದಿದ್ದರು. ಜತೆಗೆ ರಿಕ್ಷಾ ಚಾಲಕರಾಗಿ ದುಡಿಯುತಿದ್ದರು. ಹಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಮೂವರು ಗಂಡು ಮಕ್ಕಳು ಮತ್ತು ಸಹೋದರರನ್ನು ಅಗಲಿದ್ದಾರೆ.
























