ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು.

ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ನಡೆದ  ಹದಿಮೂರನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಬಯಲು ಕಂಬಳವನ್ನು ವೀಕ್ಷಿಸಲು ಕಾಲೇಜಿನ  ಪ್ರಥಮ ಬಿ ಎ,  ಬಿ ಎಸ್ ಡಬ್ಲ್ಯೂ  ಮತ್ತು ದ್ವಿತೀಯ ಬಿ ಎ, ಬಿ ಎಸ್ ಡಬ್ಲ್ಯೂ ವಿನ  ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕನ್ನಡ ಸಂಘದ ವತಿಯಿಂದ ಕನ್ನಡ ಸಹಾಯಕ ಪ್ರಾಧ್ಯಾಪಕಿ ಹಾಗೂ ಕನ್ನಡ ಸಂಘದ ಸಂಚಾಲಕಿ ಡಾ. ಅನುರಾಧಾ ಕುರುಂಜಿಯವರ ಮಾರ್ಗದರ್ಶನದಲ್ಲಿ ತೆರಳಿದ್ದರು. 

ಈ ಸಂದರ್ಭದಲ್ಲಿ ಕರ್ನಾಟಕದ ಘನತೆವೆತ್ತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವರಾದ ಮಾನ್ಯ ರಮಾನಾಥ್ ರೈ, ಕಂಬಳದ ಸಂಘಟಕರು ಹಾಗೂ ಸುಳ್ಯದ ಕೆಲವು ಗಣ್ಯರು ಉಪಸ್ಥಿತರಿದ್ದರು.





















































 
 

ಕಂಬಳದ ಸ್ಪರ್ಧೆಯಲ್ಲಿ ಈ ಹಿಂದೆ  ಸ್ಪರ್ಧಿಸಿ ವಿಜೇತರಾದ ಕೋಣಗಳ ಮಾಲೀಕರು ಹಾಗೂ ಆ ಕೋಣಗಳನ್ನು ಓಡಿಸುವವರ ಜೊತೆಗೆ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಸಂಶಯಗಳನ್ನು ಪರಿಹರಿಸಿಕೊಳ್ಳುವುದರ ಜೊತೆಗೆ  ಪುರಾತನವಾದ  ಕೃಷಿ ಸಂಬಂಧಿ ಆಚರಣೆಯಾದ ಕಂಬಳ ಕ್ರೀಡೆಗೆ ಇರುವ ಮಹತ್ವವನ್ನು ಕೇಳಿ ತಿಳಿದುಕೊಂಡರು. 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top