ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ | ಇಂದು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಇಂದು ಚಾಲನೆ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸುವ ಮೂಲಕ ಮೆಟ್ರೋಗೆ ಚಾಲನೆ ನೀಡಿದರು.

2003 ಏಪ್ರಿಲ್‍ ನಲ್ಲಿ ಹೂಗ್ಲಿ ನದಿಯ ನೀರೊಳಗೆ ನಿರ್ಮಿಸಿದ ಸುರಂಗದಡಿಯಲ್ಲಿ ಮೆಟ್ರೋ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಇದೀಗ ಉದ್ಘಾಟನೆಗೊಂಡ ಮೆಟ್ರೋ ಕೆಲ ದಿನಗಳ ಬಳಿಕ ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಶಿಕ್‍ ಮಿತ್ರಾ ತಿಳಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top