ಸಮುದ್ರ ಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ಉಪ್ಪಳ: ಸಮುದ್ರಪಾಲಾಗಿದ್ದ ವಿದ್ಯಾರ್ಥಿಯೊಬ್ಬನ ಮೃತದೇಹ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿ ಬಳಿಯ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ.

ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ.

ಮೂರು ದಿನಗಳ ಬಳಿಕ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು ಠಾಣೆಗೆ ಮಾಹಿತಿ ನೀಡಿದ್ದಾರೆ.







































 
 

ಕಳೆದ ಭಾನುವಾರ ಪೊರ್ಕೋಡಿಯ ಸ್ನೇಹಿತರಾದ ನಾಗರಾಜ್‌ (24), ಮಿಲನ್‌ (20) ಹಾಗೂ ಲಿಖಿತ್ ಕಾರ್ಯಕ್ರಮ ವೀಕ್ಷಣೆಗೆಂದು ಬಂದಿದ್ದರು. ಬಳಿಕ ಸಮುದ್ರದಲ್ಲಿ ಈಜಲು ತೆರಳಿದ್ದರು.  ಈ ಸಂದರ್ಭ ಭಾರೀ ಗಾಳಿಯಿಂದಾಗಿ ಅಲೆಗಳು ಅಪ್ಪಳಿಸಿದ್ದು, ಮೂವರು ಮುಳುಗಿ ನಾಪತ್ತೆಯಾಗಿದ್ದರು. ತಕ್ಷಣ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಎರಡು ದಿನಗಳ ಹಿಂದೆ ವಿದ್ಯಾರ್ಥಿಗಳಾದ ನಾಗರಾಜ್‌, ಮಿಲನ್‌ ಅವರ ಮೃತದೇಹ ಪಣಂಬೂರಿನಲ್ಲಿ ಪತ್ತೆಯಾಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top