ಪುತ್ತೂರು: ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ತಕ್ಷಣ ರಸ್ತೆ ದುರಸ್ತಿಪಡಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಮೂಲಕ ವಿನಂತಿಸಿದೆ.
ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಸಹಿತ ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಿದೆ.
ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಉಲ್ಲೇಖಿಸಿದೆ.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರಾದ ಪ್ರಸಾದ್ ತಿಂಗಳಾಡಿ , ರಾಜು ಶೆಟ್ಟಿ , ರೂಪೇಶ್ ನಾಯಕ್ ಹಾಜರಿದ್ದರು.