ಚಾರ್ಮಾಡಿ: ಬ್ರೇಕ್ ಫೇಲ್ ಆದ ಕೆಎಸ್ ಆರ್ ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಕಡಿದಾದ ರಸ್ತೆಯ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಸಂತೋಷ್ ತಡೆಗೋಡೆಗೆ ಗುದ್ದುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಈ ಸಂದರ್ಭ ಚಾಲಕ ಪ್ರಯಾಣಿಕರಿಗೆ ಧೈರ್ಯ ತುಂಬಿದ್ದಾರೆ. ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿದ್ದ ಕಿರು ಸೇತುವೆಗೆ ಡಿಕ್ಕಿ ಹೊಡೆಸಿ ಕೊನೆಗೂ ಬಸ್ ನಿಲ್ಲಿಸಿದ್ದಾರೆ.
ಚಾಲಕ ಸಂತೋಷ್ ಅವರಿಗೆ ಪ್ರಯಾಣಿಕರು ಸಮಯಪ್ರಜ್ಞೆ ಮೆರೆದ ಹಿನ್ನಲೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.