ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್‌ವಿಭಾಗ, ಮ್ಯಾನೇಜ್ಮೆಂಟ್ ಅನೋಸಿಯೇಶನ್ ಹಾಗೂ ಕಾಲೇಜಿನ ಇನ್ಸ್ಟಿಟ್ಯೂಶನ್ಸ್ ಇನ್ನೊವೇಶನ್ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಟ್ ಫಾರ್ ಇಂಪ್ಯಾಕ್ಟ್: ಎ ಜರ್ನಿ ಇನ್ ಸೋಶಿಯಲ್ ಎಂಟರ್‌ಪ್ರೆನ್ಯೂರ್‌ಶಿಪ್” ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು.
ಕಾಲೇಜಿನ ಹಿರಿಯ ವಿದ್ಯಾರ್ಥಿ ಜೆ.ಸಿ.ಕೃಷ್ಣ ಮೋಹನ್ ಪಿ.ಎಸ್, ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಸ್ಟಾರ್ಟಪ್ ಅವಕಾಶಗಳು ಮತ್ತು ಸಾಮಾಜಿಕ ಉದ್ಯಮಶೀಲತೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳಿಗಾಗಿ ವಿನೂತನ ಕೌಶಲ್ಯ ವರ್ಧಕ ಕಾರ್ಯಾಗಾರವನ್ನು ಆಯೋಜಿಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸಿದರು.
ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟೊನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿ, ಕುತೂಹಲವು ನವೀನ ಆಲೋಚನೆಗಳಿಗೆ ಕಾರಣವಾಗುತ್ತದೆ. ನಾವೀನ್ಯತೆ ಪರಿಣಾಮಕಾರಿ ವ್ಯಾಪಾರ ಮಾದರಿಗಳ ಅಭಿವೃದ್ಧಿಗೆ ಕಾರಣವಾಗುತ್ತದೆ. ಓರ್ವ ಉದ್ಯಮಿಯು ಯಶಸ್ವಿಯಾದಲ್ಲಿ ತನ್ನ ಸುತ್ತುಮುತ್ತಲಿನ ಹಲವಾರು ಮಂದಿಗೆ ಉದ್ಯೋಗದಾತನಾಗಿ ತಾನು ಪ್ರಗತಿಹೊಂದಿ ದೇಶದ ಅಭಿವೃದ್ಧಿಗೆ ಕಾರಣೀಭೂತನಾಗುತ್ತಾನೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಸ್ಲ್ಯಾಂಗ್‌ಲ್ಯಾಬ್ಸ್‌ನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಮಧುರಾನಾಥ್ ಆರ್., ಉದ್ಯಮದ ಗಳಿಕೆಯನ್ನು ಕೇವಲ ಸ್ವಂತ ಲಾಭಕ್ಕೆ ಮಾತ್ರ ಬಳಸಿಕೊಳ್ಳದೆ ಸಾಮಾಜಿಕ ಕಳಕಳಿಯನ್ನು ಯಾವ ರೀತಿ ವ್ಯಕ್ತಪಡಿಸಬಹುದು, ಸ್ಥಳೀಯ ಅಥವಾ ಜಾಗತಿಕ ಸಾಮಾಜಿಕ ಸವಾಲುಗಳನ್ನು ವಿಶ್ಲೇಷಿಸುವುದು ಮುಂತಾದ ವಿಷಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಉಪ್ಪಿನಂಗಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಂದೀಶ್ ವೈ.ಡಿ. ಸಾಮಾಜಿಕ ಉದ್ಯಮದಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಎಂಬ ವಿಷಯದ ಮೇಲೆ ತಾಂತ್ರಿಕ ಉಪನ್ಯಾಸ ನೀಡಿದರು.
ಹೃಷಿತಾ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್‌ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಮ್ಯಾನೇಜ್ಮೆಂಟ್ ಅನೋಸಿಯೇಶನ್ ಸಂಯೋಜಕ ಪ್ರಶಾಂತ್ ರೈ ವಂದಿಸಿದರು. ವಿದ್ಯಾರ್ಥಿನಿ ರಾಶಿ ರೈ ಕಾರ್ಯಕ್ರಮ ನಿರೂಪಿಸಿದರು. ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪುಷ್ಪಾ ಎನ್., ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು.