ಕಾನೂನು ಬಾಹಿರ ಆಟೋ ಚಾಲನೆ | ದಂಡ ವಿಧಿಸಿದ ಪೊಲೀಸರು | ಚಾಲಕನಿಂದ ಸರಕಾರಿ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

ಬಂಟ್ವಾಳ: ಆಟೋರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದ್ದಾರೆ. ಈ ಕಾರಣಕ್ಕೆ ಆವೇಶಕ್ಕೊಳಗಾದ ಆಟೋ ಚಾಲಕ, ಟ್ರಾಫಿಕ್ ಎಸ್.ಐ. ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಕಾನೂನುಬಾಹಿರವಾಗಿ ಯೂನಿಫಾರ್ಮ್‍ ಹಾಕದೆ, ಮೊಬೈಲ್‍ನಲ್ಲಿ ಮಾತನಾಡಿಕೊಂಡು ಆಟೋ ಓಡಿಸುತ್ತಿದ್ದ. ತಕ್ಷಣ ಪೊಲೀಸರು ಈತನನ್ನು ತಡೆಹಿಡಿದು ಎರಡು ಸಾವಿರ ರೂ. ದಂಡ ಹಾಕಿ ನೋಟೀಸ್ ನೀಡಿದ್ದಾರೆ. ಇದರಿಂದ ಕುಪಿತಗೊಂಡ ಆರೋಪಿ ಈ ಕೃತ್ಯ ಎಸಗಲು ಮುಂದಾಗಿದ್ದ ಎಂದು ತಿಳಿದು ಬಂದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಿಸಲಾಗಿದೆ.



































 
 

ಇದೀಗ ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top