ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ

ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನು ಮುಂದೆ ಭಾನುವಾರವೂ ಉಪ ನೋಂದಣಾ ಕಚೇರಿ ತೆರೆಯಲಿದೆ.

ಸಾರ್ವಜನಿಕರಿಗೆ ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಜಾರಿ ಮಾಡಲಾಗುವುದು. ಬಳಿಕ ಮಹಾನಗರಗಳಲ್ಲಿ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೆಲಸಕ್ಕೆ ರಜೆ ಹಾಕಿ ಬರಬೇಕಾದ ಪರಿಸ್ಥಿತಿ ಇರುವುದರಿಂದ ಜನರ ಅನುಕೂಲಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲೂ ಉಪನೋಂದಣಾ ಕಚೇರಿಯನ್ನು ಭಾನುವಾರವೂ ತೆರೆಯಲು ನಿರ್ಧಾರ ಮಾಡಲಾಗಿದ್ದು, ಭಾನುವಾರ ಕೆಲಸ ನಿರ್ವಹಿಸಿದ ಸಿಬ್ಬಂದಿಗೆ ಮಂಗಳವಾರ ರಜೆ ನೀಡುವ ಬಗ್ಗೆ ಚರ್ಚೆಯಾಗಿದೆ. ಭಾನುವಾರ ಎಲ್ಲಿ ಉಪ ನೋಂದಣಾ ಕಚೇರಿ ತೆರೆದಿರುತ್ತದೆ ಎಂದು ಮೊದಲೇ ಅಧಿಕಾರಿಗಳು ತಿಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top