ನವದೆಹಲಿ: 5,8 ಹಾಗೂ 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ ಮೇಲ್ಮವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಡೆ ನೀಡಿರುವುದಾಗಿ ವರದಿಯಾಗಿದೆ.
ರಾಜ್ಯಾದ್ಯಂತ ಸೋಮವಾರ ಹಾಗೂ ಮಂಗಳವಾರ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು. ಇಂದು ನಡೆದಿ ವಿಚಾರಣೆಯಲ್ಲಿ ಕರ್ನಾಟಕ ಸರಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ.ತ್ರಿವೇದಿ ಹಾಗೂ ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ.
ಹೈಕೋರ್ಟ್ ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.