ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರು ಆರೋಪಿಗಳಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ದೆಹಲಿಯ ಕಿಶನ್ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್ ಮುನಾವರ್ ಅಹ್ಮದ್ ಅವರಿಗೆ ಜಾಮೀನು ಲಭಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸೀರ್ ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಬೆನ್ನಲ್ಲೇ ನಡೆಸಿದ ವಿಜಯೋತ್ಸವ ಸಂದರ್ಭ ಕೆಲವರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಕಾಂಗ್ರೆಸ್ ನಾಯಕರು ಆರಂಭದಲ್ಲಿ ಇದನ್ನು ನಿರಾಕರಿಸಿದ್ದರೂ ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಮೂವರನ್ನು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀನು ದೊರಕಿದೆ.