ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು.
ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಗಳು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾದ್ಯಕ್ಷ ಬಾಲಕೃಷ್ಣ ಇಡ್ಯಡ್ಕ, ಚಂದ್ರಕಲಾ ಜಯರಾಮ ಅರುವಗುತ್ತು, ಪ್ರದೀಪ್ ಆರ್ ಗೌಡ ಅರುವಗುತ್ತು, ಶ್ರೀ ಮಹಾಲಿಂಗೇಶ್ವರ ಐಟಿಐ ಸಂಚಾಲಕ ಯು.ಪಿ.ರಾಮಕೃಷ್ಣ ಗೌಡ, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರವೀಣ್ ಕುಂಟ್ಯಾಣ, ಕುಮಾರಧಾರ ಫಾರ್ಮ್ಸ ಮಾಲಕ ವಿಜಯ ಕಮಾರ್ ಸೊರಕೆ, ಚಾರ್ವಾಕ ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಚಾರ್ವಾಕ ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕುಂಬಾರ ಕೊಪ್ಪ, ಚಾರ್ವಾಕ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು, ಪಂಚಾಯಿತಿ ಸದಸ್ಯರು, ಸಹಕಾರಿ ಸಂಘದ ಎಲ್ಲಾ ನಿರ್ದೇಶಕರು, ಸಿಬ್ಬಂದಿಗಳು, ಚಾರ್ವಾಕ, ಕಾಣಿಯೂರು, ದೋಳ್ಪಾಡಿ ಈ ಮೂರು ಗ್ರಾಮದ ಎಲ್ಲಾ ಕೃಷಿಕ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.