ಪುತ್ತೂರು: ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು.
ಅವರು ಇಂದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಸ್ವಾಗತ ಪಡೆದು ಮಾತನಾಡಿದರು.
ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾನಿದನ್ನು ಒಪ್ಪಿಕೊಳ್ಳುತ್ತೇನೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ ಆ ನೋವುಗಳನ್ನು ನಾವೆಲ್ಲ ಇವತ್ತು ಮರೆತಿದ್ದೇವೆ. ನಾವೆಲ್ಲ ಅಣ್ಣ ತಮ್ಮಂದಿರ ಮತ್ತು ಅಕ್ಕ ತಂಗಿಯರ ರೀತಿಯಲ್ಲಿ ಮುಂದಿನ ದಿನ ಪಕ್ಷಕ್ಕಾಗಿ ಕೆಲಸ ಮಾಡಲು ಬದ್ದರಿದ್ದೇವೆ. ಪಕ್ಷ ಕೊಟ್ಟಿರುವ ಸೂಚನೆಯನ್ನು ಶಿರಸ ಪಾಲಿಸಿ, ಪಕ್ಷಕ್ಕೆ ನ್ಯಾಯ ಕೊಡುವ ಮತ್ತು ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿ ನಾವು ಮಾಡಲಿದ್ದೇವೆ ಎಂದ ಅವರು, ಇವತ್ತು ನಾವೆಲ್ಲ ಕಾರ್ಯಾಲಯದಲ್ಲಿ ಭಾಗಿಯಾಗಿ ಮುಕ್ತ ಮನಸ್ಸಿನಿಂದ ಜೊತೆಯಾಗಿದ್ದೇವೆ. ಈ ರೀತಿಯ ವಾತಾವರಣ ಮುಂದಿನ ನೂರಾರು ವರ್ಷಗಳ ಕಾಲ ಇರಲಿ. ಪುತ್ತೂರಿನಲ್ಲಿ ಬಿಜೆಪಿ ಯಾವತ್ತು ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ಆಗಲಿ. ಈ ಕ್ಷಣದಿಂದಲೇ ನಾವೆಲ್ಲ ಪಕ್ಷ ಕೊಟ್ಟಿರುವ ಕೆಲಸವನ್ನು ನಿರ್ವಹಿಸಿಕೊಂಡು ನಾಳಿನ ದಿನ ಚುನಾವಣೆಯಲ್ಲಿ ಬ್ರಿಜೇಶ್ ಚೌಟ ಅವರನ್ನು ನಾಲ್ಕು ಲಕ್ಷ ಅಧಿಕ ಮತಗಳಿಂದ ಗೆಲ್ಲಿಸುವ ಯೋಚನೆ ಕಾರ್ಯಕರ್ತರು ಮಾಡಿದರೆ ಯಾವುದೇ ಕಾರ್ಯ ಕಷ್ಟವಾಗುವುದಿಲ್ಲ ಎಂದರು.
ಇಂದು ಸಾಮಾಜಿಕ ಜಾಲತಾಣ ಬಹಳ ಪ್ರಬಲವಾಗಿದೆ. ಹಾಗಾಗಿ ಪಕ್ಷದ ವಿಚಾರದಲ್ಲಿ ನಮ್ಮ ಸಂಘ, ನಾಯಕರ ವಿರುದ್ಧ ಯಾರು ಕೂಡಾ ವೈಯುಕ್ತಿಕ ವಿಚಾರ ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶ ರವಾನಿಸಬಾರದು. ಸಾಮಾಜಿಕ ಜಾಲತಾಣದ ವಿಷಯ ಬಿಟ್ಟು ನಾವೆಲ್ಲ ನಮ್ಮ ಬೂತ್ ನಲ್ಲಿ ಕಾರ್ಯ ಮಾಡಬೇಕು ಎಂದರು.
ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರು ಅರುಣ್ ಕುಮಾರ್ ಪುತ್ತಿಲರಿಗೆ ಪಕ್ಷದ ಶಾಲು ಹಾಕಿ, ಸಿಹಿ ಹಂಚಿದರು.
ಈ ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್,ರಾಜ್ಯ ಪ್ರಮುಕು ಆರ್. ಸಿ. ನಾರಾಯಣ,ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ, ಸುರೇಶ್ ಕಣ್ಣರಾಯ, ಸುಧೀರ್ ಶೆಟ್ಟಿ, ಜ್ಯೋತಿ ಆರ್ ನಾಯಕ್, ರಾಧಾಕೃಷ್ಣ ನಂದಿಲ, ಇಂದುಶೇಖರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.