ಪುತ್ತೂರು: ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ ಪ್ರವೇಶ ಮಾಡಿ ತನಗೆ, ತಾಯಿಗೆ, ಪತ್ನಿ, ಮಕ್ಕಳಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೋಡೆಗೆ ಕಾಲಿನಿಂದ ಒದ್ದು ಅಸಭ್ಯವಾಗಿ ವರ್ತನೆ ತೋರಿದ್ದಲ್ಲದೆ, ನೀನು ಬಾರಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಿಯಾ ಎಂದು ಗದರಿಸಿ, ನಿನ್ನನ್ನು ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ದೂರಿನಲ್ಲಿ ಹೇಳಲಾಗಿದೆ.