ಸುಳ್ಯ: ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆಗೆ ಸುಳ್ಯ ವಿಧಾನಸಭೆಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಸುಳ್ಯ ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸಹಸಂಚಾಲಕರಾಗಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ನೇಮಕ ಮಾಡಿದ್ದಾರೆ.