ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ ನಿಗ್ರಹ ಘಟಕದ ವತಿಯಿಂದ ಮಾನವನಲ್ಲಿ ವಿವೇಚನಾ ಶಕ್ತಿಯ ಹೆಚ್ಚಿಸುವಿಕೆ ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ, ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ, ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ನಾವು ಮಾಡುವ ಕೆಲಸ ನಿರಂತರವಾದ ಪ್ರಕ್ರಿಯೆಯಾಗಿರುವಂತೆ ನೋಡಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಪಂಜದ ನೆಮ್ಮದಿ ಕೌನ್ಸೆಲಿಂಗ್ ಸೆಂಟರ್ ನ ಮಾಲಕಿ ಶ್ರದ್ಧಾ ಲಲಿತ್ ರೈ ಮಾತನಾಡಿ, ಮಾನಸಿಕ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಲು ಬೇರೆ ಬೇರೆ ಒಳ್ಳೆಯ ಹವ್ಯಾಸಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರ ಜೊತೆಗೆ ಮಾರ್ಗದರ್ಶಕರ ಸಲಹೆಯನ್ನು ಪಡೆಯುವುದು ಉತ್ತಮ ಎಂದರು.
ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ., ಮಹಿಳಾ ದೌರ್ಜನ್ಯ ನಿಗ್ರಹ ಘಟಕದ ಸಂಘಟಕಿ ಪ್ರತಿಭಾ ಎಸ್. ಉಪಸ್ಥಿತರಿದ್ದರು.
ಮಹಿಳಾ ದೌರ್ಜನ್ಯ ನಿಗ್ರಹ ಘಟಕದ ವಿದ್ಯಾರ್ಥಿ ಸಂಘಟಕಿ ಸಂಜನ ಪಿ.ಎ. ಸ್ವಾಗತಿಸಿದರು. ಸ್ವಾತಿ ಕೆ. ವಂದಿಸಿದರು. ಲಾವಣ್ಯ ಅತಿಥಿಗಳ ಪರಿಚಯ ಮಾಡಿದರು. ವಿದ್ಯಾರ್ಥಿನಿಯರಾದ ಶ್ರಾವ್ಯವಾಣಿ, ಶೋಭಿತಾ, ಲಾವಣ್ಯ ಹಾಗೂ ಅಭಿಜ್ಞಾ ಆಶಯಗೀತೆ ಹಾಡಿದರು. ಶಮೀರ್ ಕಾರ್ಯಕ್ರಮದ ನಿರೂಪಿಸಿದರು.