ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಗೂ ಅವರ ತತ್ವ ಹಾಗೂ ಯುವಪೀಳಿಗೆಗೆ ನೀಡಿದ ಸ್ಪೂರ್ತಿಯ ಕರೆಗಳಿಂದಾಗಿ ಇಡೀ ಪ್ರಪಂಚಕ್ಕೇ ಆಧ್ಯಾತ್ಮಿಕ ಗುರುವಾಗಿ ಮಾರ್ಪಟ್ಟವರು.  ಭಾರತೀಯ ತತ್ವ ಹಾಗೂ ಮಹತ್ವವನ್ನು ಪಾಶ್ಚಿಮಾತ್ಯ ದೇಶಗಳಿಗೆ ಪರಿಚಯಿಸುವಲ್ಲಿ ಮೊದಲಿಗರೆಂದರೆ ತಪ್ಪಾಗುವುದಿಲ್ಲ. ಜೊತೆಗೆ ನುಡಿದಂತೆ ನಡೆದವರು ಸ್ವಾಮಿ ವಿವೇಕಾನಂದರು ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ ಹೇಳಿದರು.

ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವದ ಸವಿನೆನಪಿಗಾಗಿ ಜಗತ್ತಿಗೆ ಭಾರತದ ಆಧ್ಯಾತ್ಮಿಕ ಚಿಂತನೆಯನ್ನು ಪರಿಚಯಿಸಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವಿವೇಕಾನಂದರ ವ್ಯಕ್ತಿತ್ವ ನಮಗೆಲ್ಲ ಆದರ್ಶವಾಗಬೇಕು. ನಮಗೂ ಈ ನೆಲಕ್ಕೂ ಇರುವ ಸಂಬಂಧವನ್ನು ಸದಾ ಅವರು ನೆನಪಿಸುತ್ತಾ ಇದ್ದವರು. ತನಗಾಗಿ ಏನನ್ನೂ ಮಾಡಿಕೊಳ್ಳದೆ, ನಮ್ಮನ್ನು ಕೀಳಾಗಿ ಕಾಣುತ್ತಿದ್ದವರ ಮುಂದೆ ಭಾರತದ ಹಿರಿಮೆಯನ್ನು ಸಾರಿ ಭಾರತೀಯರ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದವರು. ವಿದ್ಯಾರ್ಥಿಗಳು ಬದುಕಿಗೆ ವಿವೇಕಾನಂದರ ತತ್ತ್ವಗಳನ್ನು ಪ್ರತಿನಿತ್ಯ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದು ಹೇಳಿದರು.



































 
 

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ. ವಿ. ಗಣಪತಿ ಭಟ್ ಉಪಸ್ಥಿತರಿದ್ದರು. ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಆಧ್ಯಯನ ಕೇಂದ್ರದ ಸಂಯೋಜಕಿ ಹಾಗೂ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆ ವಿದ್ಯಾ ಎಸ್ ಸ್ವಾಗತಿಸಿ, ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top