ಪುತ್ತೂರು: 2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನವೇ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಪುತ್ತೂರು, ಕಡಬ ತಾಲೂಕಿನಲ್ಲಿ ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.
ಸೋಮವಾರ ಪ್ರಥಮ ಭಾಷಾ ಪರೀಕ್ಷೆ ನಡೆದಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತೆರೆಯಲಾಗಿರುವ 13 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದೆ.