ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತರಾದವರು ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ಸ್ಪೋಟದ ಪ್ರಧಾನ ಆರೋಪಿಗಳಾದ ಮಝಾವೀರ್, ಅಬ್ದುಲ್ ಮತೀನ್ ತಾಹ್ಯಾ ಜತೆ ನಿರಂತದ ಸಂಪರ್ಕದಲ್ಲಿದ್ದು, ಅವರಿಬ್ಬರಿಗೆ ಜೊತೆಯಾಗಿ ಇವರು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಜತೆ ಶಂಕಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲಗಳನ್ನು ಮಾಡಿಕೊಟ್ಟಿರುವ ಶಂಕೆ ಇದೆ.
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟಿದ್ದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಉಳಿದಿದ್ದ ಶಂಕಿತನ ಜೊತೆಗೆ ಈತನೂ ಇದ್ದ. ಸ್ಫೋಟಕ್ಕೆ ಮುನ್ನ ಇವರು ಓಡಾಡಿದ್ದ ಜಾಡನ್ನು ಎನ್‌ಐಎ ಹಿಡಿದಿದೆ. ಎರಡು ತಿಂಗಳು ತಮಿಳುನಾಡಿನ ಲಾಡ್ಜ್‌ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.