ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ !

ಕಾಪು : ಮಹಿಳಾ ಪೇದೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾವು ಠಾಣೆಯ ಪೇದೆ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡವರು.

ಮೂಲತಃ ಬಾಗಲಕೋಟೆಯವರಾಗಿರುವ ಜ್ಯೋತಿ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ಕ್ವಾಟ್ರಸ್‍ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ.



































 
 

ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top