ಮಂಗಳೂರು: ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಈ ಕುರಿತು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮುಡಿಪು ರಸ್ತೆಯಲ್ಲಿ ಒಂದು ಭಾಗವನ್ನು ತಡೆಮಾಡಿ ಒಂದು ಸಮುದಾಯ ಅನ್ಯರಾಜ್ಯಗಳ ವ್ಯಕ್ತಿಗಳನ್ನು ಸೇರಿಸಿ ಇಫ್ತಾರ್ ಕೂಟ ಮಾಡಿರುವುದು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದರಿಂದ ಚುನಾವಣಾ ನೀತಿ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ತಕ್ಷಣ ಈ ಕುರಿತು ಮೊಕದ್ದಮೆ ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಭಬೇಕೆಂದು ಮುಡಿಪು ವಲಯ ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ.