ಉಪ್ಪಿನಂಗಡಿ: ವಿಜಯ – ವಿಕ್ರಮ ಜೋಡುಕರೆ ಕಂಬಳೋತ್ಸವದಲ್ಲಿ ಪಾಲ್ಗೊಂಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು, ಕಲಹ ಕನ್ನಡ ಸಿನಿಮಾದ ಪೋಸ್ಟರ್ ಅನಾವರಣಗೊಳಿಸಿದರು.
ಪುತ್ತೂರು ಶಾಸಕ, ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು.
ಕಂಬಳಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿರುವ ವಲೇರಿಯನ್ ಡಯಾಸ್ (ಅಪ್ಪಣ್ಣ) ಅವರನ್ನು ಈ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು.
ವೇದಿಕೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನ್ಯಾಕ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಕೋಟಿ- ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ದ.ಕ. ಜಿಲ್ಲಾಧ್ಯಕ್ಷ ರೂಪೇಶ್ ರೈ ಅಲಿಮಾರ್, ವಿಜಯ್- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹಗ್ಡೆಹಿತ್ತು, ಪ್ರಮುಖರಾದ ರೋಶನ್ ರೈ ಬನ್ನೂರು, ಸಾಜ ಶಿವರಾಂ ಆಳ್ವ, ಇರುವೈಲು ಪಾಣಿಲ ಸತೀಶ್ಚಂದ್ರ ಪೂಜಾರಿ, ಪ್ರಜ್ವಲ್ ರೈ ಪಾತಾಜೆ, ಪಂಜಿಗುಡ್ಡೆ ಈಶ್ವರ ಭಟ್, ಪ್ರವೀಣ್ ಕುಮಾರ್ ಕದಿಕ್ಕಾರು ಬೀಡು, ದಾಸಪ್ಪ ಗೌಡ ಕೋಡಿಯಡ್ಕ, ಕೃಷ್ಣಪ್ರಸಾದ್ ಆಳ್ವ, ನಳಿನಿ ಪಿ. ಶೆಟ್ಟಿ, ಅನಿಲ್ ಶೆಟ್ಟಿ, ಶಕೀಲಾ ಶೆಟ್ಟಿ, ನಳಿನಿ ಪಿ. ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಬೊಳ್ಳಾವು, ಬಾರ್ಕೂರು ಶಾಂತರಾಮ ಶೆಟ್ಟಿ, ಮಹಾಲಿಂಗ ಕಜೆಕ್ಕಾರು, ಭಾರತಿ ಕಜೆಕ್ಕಾರು, ಜಾನ್ ಕೆನ್ಯೂಟ್, ಪ್ರಸನ್ನ ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷರಾದ ನಟೇಶ್ ಪೂಜಾರಿ, ವಿದ್ಯಾಧರ ಜೈನ್ ಪದ್ಮವಿದ್ಯಾ, ವಿಠಲ ಶೆಟ್ಟಿ ಕೊಳ್ಕೊಟ್ಟು, ರಾಮಚಂದ್ರ ಮಣಿಯಾಣಿ, ಜಯಂತ ಪೊರೋಳಿ, ವಾರಿಸೇನ ಜೈನ್ ಕೋಡಿಯಾಡಿಗುತ್ತು, ರಾಜೀವ ಶೆಟ್ಟಿ ಕೇದಗೆ, ಶಿವಪ್ರಸಾದ್ ರೈ ಮಠಂತಬೆಟ್ಟು, ಮುರಳೀಧರ ರೈ ಮಠಂತಬೆಟ್ಟು, ಸುದೇಶ್ ಶೆಟ್ಟಿ ಶಾಂತಿನಗರ, ಗೌರವ ಸಲಹೆಗಾರ ಯು. ರಾಮ, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಗೋಳ್ತಮಜಲು, ಚಂದ್ರಶೇಖರ ಮಡಿವಾಳ, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗೈ, ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಬೊಳ್ಳಾವು, ವಿಜಯ ಪೂಜಾರಿ ಚೀಮುಳ್ಳು, ದಿಲೀಪ್ ಶೆಟ್ಟಿ ಕರಾಯ, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು, ಕುಮಾರನಾಥ ಪಲ್ಲತ್ತಾರು ಕೋಡಿಂಬಾಡಿ, ಸತೀಶ್ ಶೆಟ್ಟಿ ಹೆನ್ನಾಳ, ಜಯಾನಂದ ಪಿಲಿಗುಂಡ, ರಾಕೇಶ್ ಶೆಟ್ಟಿ ಕೆಮ್ಮಾರ, ಜಗದೀಶ್ ಪೂಜಾರಿ ಪರಕ್ಕಜೆ, ಉಮೇಶ ನಟ್ಟಿಬೈಲು ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿದರು. ಸಮಿತಿಯ ನಿಹಾಲ್ ಶೆಟ್ಟಿ ವಂದಿಸಿದರು. ಸಮಿತಿ ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.