ಬಂಟ್ವಾಳ: ಬಾಲಕನೋರ್ವ ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಎಂಬವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕ.
ಆದಿಶ್ ತನ್ನ ಮನೆಯ ಮಹಡಿಯಲ್ಲಿ ಮಲಗಿದ್ದು, ಮುಂಜಾನೆ ಎದ್ದು ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡಿದಾಗ ಮಹಡಿಯಿಂದ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.
ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.