ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ 90,443 ಲೀಟರ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನೀತಿ ಸಂಹಿತೆ ಜಾರಿಯಾದ ಬಳಿಕ 1,95,47,179 ರೂ. ಮೌಲ್ಯದ ಮದ್ಯ ವಶಪಡಿಸಲಾಗಿದೆ. ಜತೆಗೆ 8,69,950 ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 278 ಎಫ್.ಐ.ಆರ್. ದಾಖಲಾಗಿದೆ.
ರಾಷ್ಟ್ರೀಯ ಕುಂದುಕೊರತೆ ನಿವಾರಣಾ ವ್ಯವಸ್ಥೆ ಮೂಲಕ ಜಿಲ್ಲೆಯಲ್ಲಿ 92 ದೂರುಗಳು ಬಂದಿದ್ದು ಅವುಗಳಲ್ಲಿ 90 ದೂರುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

























